ಲೂಕ 2:25 - ಪರಿಶುದ್ದ ಬೈಬಲ್25 ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತ್ಯಾ ಕಾಲಾತ್ ಸಿಮಾವ್ ಮನ್ತಲೊ ಎಕ್ ಮಾನುಸ್ ಜೆರುಜಲೆಮಾತ್ ಹೊತ್ತೊ.ತೊ ಎಕ್ ಬರೊ ಅನಿ ದೆವಾಚ್ಯಾ ಭಿಂಯಾನ್ ಚಲ್ತಲೊ ಮಾನುಸ್,ತೊ ಇಸ್ರಾಯೆಲಾಚ್ಯಾ ಸುಟ್ಕಾ ಹೊತಲ್ಯಾ ಎಳಾಕ್ ರಾಕುನ್ಗೆತ್ ಹೊತ್ತೊ. ಪವಿತ್ರ್ ಆತ್ಮೊ ತೆಚ್ಯಾ ವಾಂಗ್ಡಾ ಹೊತ್ತೊ. ಅಧ್ಯಾಯವನ್ನು ನೋಡಿ |