Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:27 - ಪರಿಶುದ್ದ ಬೈಬಲ್‌

27 ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಅದನ್ನು ಒಳಕ್ಕೆ ತರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖಾಯ್ದ್ಯಾತ್ ಸಾಂಗಲ್ಲ್ಯಾ ಸರ್ಕೆ ಪೊರಾಕ್ ದೆವಾಕ್ ಭೆಟ್ವುಕ್ ಮನುನ್, ತೆಚೆ ಬಾಯ್-ಬಾಬಾ ದೆವಾಚ್ಯಾ ಗುಡಿತ್ ಭೆಟ್ವುಕ್ ಜೆಜುಕ್ ಘೆವ್ನ್ ಯೆಲ್ಲ್ಯಾನಿ. ತನ್ನಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ಸಿಮಿಯಾವ್ ದೆವಾಚ್ಯಾ ಗುಡಿಕ್ಡೆ ಯೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:27
15 ತಿಳಿವುಗಳ ಹೋಲಿಕೆ  

ಈ ದರ್ಶನದ ಬಗ್ಗೆ ಪೇತ್ರನು ಇನ್ನೂ ಆಲೋಚಿಸುತ್ತಿದ್ದನು. ಆದರೆ ಪವಿತ್ರಾತ್ಮನು ಅವನಿಗೆ, “ಇಗೋ, ನಿನ್ನನ್ನು ಮೂರು ಜನರು ಹುಡುಕುತ್ತಾ ಬಂದಿದ್ದಾರೆ.


ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.


ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.


ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದರು.


ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಪೌಲ ತಿಮೊಥೆಯರು ಮುಸಿಯ ನಾಡಿನ ಸಮೀಪಕ್ಕೆ ಹೋದರು. ಅವರು ಬಿಥೂನಿಯ ನಾಡಿನೊಳಗೆ ಹೋಗಬೇಕೆಂದಿದ್ದರು. ಆದರೆ ಯೇಸುವಿನ ಆತ್ಮನು ಅಲ್ಲಿಗೆ ಹೋಗದಂತೆ ಅವರನ್ನು ತಡೆದನು.


ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.


ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು.


ಯೇಸುವು ಜೋರ್ಡನ್ ನದಿಯಿಂದ ಹಿಂತಿರುಗಿದನು. ಆತನು ಪವಿತ್ರಾತ್ಮಭರಿತನಾಗಿದ್ದನು. ಪವಿತ್ರಾತ್ಮನು ಯೇಸುವನ್ನು ಅಡವಿಗೆ ನಡಿಸಿದನು.


ಶುದ್ಧೀಕರಣದ ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.


ಆಗ ದೇವರಾತ್ಮನು ಸೈತಾನನಿಂದ ಶೋಧಿಸಲ್ಪಡಲು ಯೇಸುವನ್ನು ಅಡವಿಗೆ ನಡೆಸಿದನು.


ಆಮೇಲೆ ಕ್ರಯಪತ್ರದ ರುಜು ಮಾಡಿದ ಒಂದು ಪ್ರತಿಯನ್ನು ಮತ್ತು ರುಜು ಮಾಡದ ಒಂದು ಪ್ರತಿಯನ್ನು ತೆಗೆದುಕೊಂಡೆನು.


ಸಿಮೆಯೋನನು ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರಿಗೆ ಹೀಗೆಂದು ಸ್ತೋತ್ರ ಸಲ್ಲಿಸಿದನು:


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು