Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:29 - ಪರಿಶುದ್ದ ಬೈಬಲ್‌

29 “ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಒಡೆಯನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಸರ್ವೇಶ್ವರರಾದ ಕರ್ತದೇವರೇ, ನಿಮ್ಮ ವಾಗ್ದಾನದ ಪ್ರಕಾರ, ನಿಮ್ಮ ದಾಸನನ್ನು ಸಮಾಧಾನದಿಂದ ಈಗ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 “ಸರ್ವೆಸ್ವರಾ ಅತ್ತಾ ತುಜ್ಯಾ ಸೆವಕಾಕ್ ಸಮಾದಾನಾನ್ ಜಾವ್ಕ್ ಸೊಡ್. ತಿಯಾ ಸಾಂಗಟಲ್ಲಿ ಗೊಸ್ಟ್ ತಿಯಾ ಖರಿ ಕರ್‍ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:29
9 ತಿಳಿವುಗಳ ಹೋಲಿಕೆ  

ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.


“ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ಆಗ ಇಸ್ರೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ಕಣ್ಣಾರೆ ಕಂಡದ್ದರಿಂದ ನೀನು ಬದುಕಿರುವುದು ನನಗೆ ನಿಶ್ಚಯವಾಯಿತು. ನಾನು ಈಗ ಸಮಾಧಾನದಿಂದ ಸಾಯವೆನು” ಎಂದು ಹೇಳಿದನು.


ಸಿಮೆಯೋನನು ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರಿಗೆ ಹೀಗೆಂದು ಸ್ತೋತ್ರ ಸಲ್ಲಿಸಿದನು:


ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು