ಲೂಕ 2:37 - ಪರಿಶುದ್ದ ಬೈಬಲ್37 ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಅತ್ತಾ ತಿ ಆಂಯ್ಸಿರ್ ಚಾರ್ ವರ್ಸಾಚಿ ವಿಧವ್. ದಿಸ್ ಅನಿ ರಾತ್ ದೆವಾಚಿ ಭಜನ್ ಕರುನ್ಗೆತ್ ಉಪಾಸ್, ಮಾಗ್ನಿ ಕರುನ್ಗೆತ್ ತಿ ದೆವಾಚ್ಯಾ ಗುಡಿತುಚ್ ರ್‍ಹಾಯ್. ದೆವಾಚಿ ಗುಡಿ ಸೊಡುನ್ ತಿ ಕಡೆಕ್ ಜಾಯ್ನಸಿ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.