Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:40 - ಪರಿಶುದ್ದ ಬೈಬಲ್‌

40 ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ದಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆ ಶಿಶುವು ಬೆಳೆದು ಬಲಗೊಂಡು; ಜ್ಞಾನದಲ್ಲಿ ವೃದ್ಧಿಯಾಯಿತು ಮತ್ತು ದೇವರ ಕೃಪೆಯು ಶಿಶುವಿನ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಪೊರ್ ಮೊಟೊ ಹೊವ್ನ್ ಘಟ್-ಮುಟ್ ಹೊಲೊ, ಅನಿ ಬುದ್ದಿನ್ಬಿ ಬರೊ ಹೊಲೊ. ದೆವಾಚಿ ಕುರ್ಪಾ ತೆಚ್ಯಾ ವರ್‍ತಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:40
17 ತಿಳಿವುಗಳ ಹೋಲಿಕೆ  

ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.


ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಬಾಲಕನಾದ ಸಮುವೇಲನು ದೊಡ್ಡವನಾಗುತ್ತಲೇ ಇದ್ದನು. ಅವನು ದೇವರಿಗೆ ಮತ್ತು ಜನರಿಗೆ ಪ್ರಿಯನಾದನು.


ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.


ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು.


ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ.


ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು.


ಆ ಸ್ತ್ರೀಗೆ ಒಂದು ಗಂಡುಮಗು ಜನಿಸಿತು. ಅವಳು ಅದಕ್ಕೆ ಸಂಸೋನ ಎಂದು ಹೆಸರಿಟ್ಟಳು. ಸಂಸೋನನು ಬೆಳೆದು ದೊಡ್ಡವನಾದನು. ಯೆಹೋವನು ಅವನನ್ನು ಆಶೀರ್ವದಿಸಿದನು.


ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.


ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.


ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು