ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.
ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.
“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.
ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.
“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.
ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.
“ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.