Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:44 - ಪರಿಶುದ್ದ ಬೈಬಲ್‌

44 ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆತನ ತಂದೆತಾಯಿಗಳು ಅದನ್ನು ತಿಳಿಯದೆ ಆತನು ಯಾತ್ರೆಯವರ ಗುಂಪಿನಲ್ಲಿ ಸೇರಿರುವನು ಎಂದು ಭಾವಿಸಿ ಒಂದು ದಿನದ ಪ್ರಯಾಣ ನಡೆದು ಬಂಧುಬಾಂಧವರಲ್ಲಿಯೂ ಪರಿಚಿತಿಯವರಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ, ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿಚಿತರಲ್ಲಿಯೂ ಬಾಲಕ ಯೇಸುವನ್ನು ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತೆನಿ ಅಪ್ನಾಚ್ಯಾ ಗಾವಾಕ್ ಯೆತಲ್ಯಾ ಲೊಕಾಂಚ್ಯಾ ವಾಂಗ್ಡಾ ಯೆವ್ಲಾ ಕಾಯ್ಕಿ ಮನುನ್ ಯವ್ಜುನ್, ಎಕ್ ದಿಸಾಚಿ ವಾಟ್ ಚಲುನ್ ಗೆಲ್ಲ್ಯಾ ಮಾನಾ, ತೆನಿ ತೆಂಚ್ಯಾ ಸೊಯ್ರ್ಯಾತ್ನಿ ಅನಿ ವಳ್ಕಿಚ್ಯಾತ್ನಿ ಜೆಜುಕ್ ಹುಡಕ್ಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:44
6 ತಿಳಿವುಗಳ ಹೋಲಿಕೆ  

ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ


ಆದರೆ ಅಲ್ಲೆಲ್ಲೂ ಕಾಣದೆ ಯೇಸುವನ್ನು ಹುಡುಕಲು ಜೆರುಸಲೇಮಿಗೆ ಮರಳಿಹೋದರು.


ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು