ಲೂಕ 20:10 - ಪರಿಶುದ್ದ ಬೈಬಲ್10 ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಫಲಕಾಲ ಬಂದಾಗ ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಗೇಣಿದಾರರು ಅವನನ್ನು ಹೊಡೆದು ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಫಲಕಾಲ ಬಂದಾಗ ದ್ರಾಕ್ಷೆಯತೋಟದ ಹುಟ್ಟುವಳಿಯ ಪಾಲನ್ನು ತೆಗೆದುಕೊಳ್ಳುವದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ದರಾಕ್ಷಿ ಗೊಳಾ ಕರ್‍ತಲ್ಲ್ಯಾ ಎಳಾರ್, ತ್ಯಾ ಮಾನ್ಸಾನ್ ಅಪ್ನಾಚೊ ಸುಗ್ಗಿಚೊ ವಾಟೊ ಘೆವ್ನ್ ಯೆ ಮನುನ್ ಅಪ್ನಾಚ್ಯಾ ಎಕ್ಲ್ಯಾ ಗುಲಾಮಾಕ್ ಮಳ್ಯಾಕ್ಡೆ ಧಾಡುನ್ ದಿಲ್ಯಾನ್, ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತ್ಯಾ ಗುಲಾಮಾಕ್ ಮಾರ್ ಘಾಟ್ಲ್ಯಾನಿ, ಅನಿ ಖಾಲಿ ಹಾತಾನಿ ಪರ್ತುನ್ ಧಾಡ್ಲ್ಯಾನಿ. ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.