ಲೂಕ 20:13 - ಪರಿಶುದ್ದ ಬೈಬಲ್13 “ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಆ ದ್ರಾಕ್ಷೆಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ತೊ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್ “ಮಿಯಾ ಕಾಯ್ ಕರು? ಮಿಯಾ ಮಾಜ್ಯಾ ಅಪುರ್‍ಬಾಯೆಚ್ಯಾ ಎಕ್ಲ್ಯಾಚ್ ಲೆಕಾಕ್ ಧಾಡುನ್ ದಿತಾ, ತೆಚೆ ತೆನಿ ಆಯಿಕ್ತಿಲ್!” ಮಟ್ಲ್ಯಾನ್, ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.