21 ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!
21 “ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.
ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.
ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.
ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.
ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)