Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:5 - ಪರಿಶುದ್ದ ಬೈಬಲ್‌

5 ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಕೇಳಿದ ಅವರೆಲ್ಲರೂ ತಮ್ಮತಮ್ಮೊಳಗೆ ಸಮಾಲೋಚಿಸುತ್ತಾ ಸಂವಾದಿಸುತ್ತಾ, “ದೇವರಿಂದ ಬಂದಿತು, ಎಂದು ನಾವು ಹೇಳಿದರೆ, ‘ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವರು ತಮ್ಮೊಳಗೆ, “ ‘ಪರಲೋಕದಿಂದ’ ಎಂದು ನಾವು ಹೇಳಿದರೆ ಆತನು, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ತೆನಿ ಅಪ್ನಾ-ಅಪ್ನಾ ಮದ್ದಿ “ಅಮಿ ಕಾಯ್ ಸಾಂಗುವಾ? ಅಮಿ ದೆವಾಕ್ನಾ ಮಟ್ಲಾಂವ್ ತರ್, ತೊ ಅಮ್ಕಾ, ತುಮಿ ಕಶ್ಯಾಕ್ ಜುವಾಂವಾ ವರ್‍ತಿ ವಿಶ್ವಾಸ್ ಕರುಕ್ನ್ಯಾಶಿ? ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:5
11 ತಿಳಿವುಗಳ ಹೋಲಿಕೆ  

‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.


ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.


‘ನನ್ನ ನಂತರ ಒಬ್ಬ ವ್ಯಕ್ತಿಯು ಬರುವನು. ಆತನು ನನಗಿಂತಲೂ ದೊಡ್ಡವನು. ಏಕೆಂದರೆ ಆತನು ನನಗಿಂತಲೂ ಮೊದಲೇ ಇದ್ದವನು ಮತ್ತು ಯಾವಾಗಲೂ ಇದ್ದವನು’ ಎಂದು ನಾನು ಹೇಳುತ್ತಿದ್ದುದು ಈತನ ವಿಷಯವಾಗಿಯೇ.


ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.


ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.


ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು.


‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು