Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:6 - ಪರಿಶುದ್ದ ಬೈಬಲ್‌

6 ‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಅಮಿ ಮಾನ್ಸಾಕ್ನಾ ಮನುನ್ ಸಾಂಗಟ್ಲ್ಯಾರ್, ಹಿತ್ತೆ ಹೊತ್ತಿ ಸಗ್ಳಿ ಲೊಕಾ ಅಮ್ಕಾ ಗುಂಡ್ಯಾನಿ ಮಾರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆನಿ ಸಗ್ಳೆ ತೊ ಎಕ್ ಪ್ರವಾದಿ, ಮನುನ್ ಮಾನ್ತ್ಯಾತ್” ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:6
13 ತಿಳಿವುಗಳ ಹೋಲಿಕೆ  

‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.


ಹಾಗಾದರೆ, ಏನನ್ನು ನೋಡಲು ಹೋಗಿದ್ದಿರಿ? ಒಬ್ಬ ಪ್ರವಾದಿಯನ್ನೋ? ಹೌದು! ಯೋಹಾನನು ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.


ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.


ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಈ ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು.


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.


ಆದರೆ ಸಭಿಕರು, “ನಾವು ಪಸ್ಕಹಬ್ಬದ ಕಾಲದಲ್ಲಿ ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಏಕೆಂದರೆ ಜನರು ಕೋಪಗೊಂಡು ದಂಗೆ ಏಳಬಹುದು” ಎಂದು ಹೇಳಿದರು.


ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು.


ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.


ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.


ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.


ಬಳಿಕ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು