Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:7 - ಪರಿಶುದ್ದ ಬೈಬಲ್‌

7 ಬಳಿಕ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಬಂದು, “ಅದು ಎಲ್ಲಿಂದ ಬಂದಿತೋ ನಮಗೆ ತಿಳಿಯದು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಎಲ್ಲಿಂದ ಬಂತೋ ನಾವರಿಯೆವು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಅದು ಎಲ್ಲಿಂದಲೋ ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಮನುನ್ ತೆನಿ “ಕೊನಾಕ್ನಾ ಯೆಲೊ ,ಮನುನ್ ಅಮ್ಕಾ ಗೊತ್ತ್ ನಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:7
18 ತಿಳಿವುಗಳ ಹೋಲಿಕೆ  

ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.


ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.


ಕೆಲಸಕ್ಕೆ ಬಾರದ ಕುರುಬನೇ, ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೆ. ಅವನನ್ನು ಶಿಕ್ಷಿಸಿರಿ! ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿಹಾಕಿರಿ, ಮತ್ತು ಬಲಗಣ್ಣನ್ನು ಕಿತ್ತುಹಾಕಿರಿ. ಆಗ ಅವನ ಬಲಗೈ ಅಪ್ರಯೋಜಕವಾಗುವದು, ಬಲಗಣ್ಣು ದೃಷ್ಟಿಹೀನವಾಗುವದು.


ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ.


ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.


ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾನು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ.


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.


ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು