Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:10 - ಪರಿಶುದ್ದ ಬೈಬಲ್‌

10 ಬಳಿಕ ಯೇಸು ಅವರಿಗೆ, “ಜನಾಂಗಗಳು ಬೇರೆ ಜನಾಂಗಗಳಿಗೆ ವಿರುದ್ಧವಾಗಿ ಹೋರಾಡುವವು. ರಾಜ್ಯಗಳು ಬೇರೆ ರಾಜ್ಯಗಳಿಗೆ ವಿರುದ್ಧವಾಗಿ ಹೋರಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಆತನು ಅವರಿಗೆ ಹೇಳಿದ್ದೇನಂದರೆ - ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಅವರಿಗೆ, “ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಫಿಡೆ ಜೆಜುನ್, “ದೊನ್ ದೆಶಾ ಎಕೆಮೆಕಾಚ್ಯಾ ವಾಂಗ್ಡಾ ಝಗಡ್ತ್ಯಾತ್; ಎಕ್ ರಾಜ್, ಅನಿ ಎಕ್ ರಾಜಾಚ್ಯಾ ವಾಂಗ್ಡಾ ಮಾರಾಮಾರಿಕ್ ಉಟ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:10
12 ತಿಳಿವುಗಳ ಹೋಲಿಕೆ  

ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.


“ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.


ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.


ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.


ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)


ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು.


ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು