ಲೂಕ 21:16 - ಪರಿಶುದ್ದ ಬೈಬಲ್16 ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತುಮ್ಚ್ಯಾತ್ಲ್ಯಾ ಉಲ್ಲ್ಯಾಕ್ನಿ, ತುಮ್ಚೆ ಬಾಯ್-ಬಾಬಾ, ತುಮ್ಚಿ ಭಾವಾ, ತುಮ್ಚೆ ಸೊಯ್ರೆ, ಅನಿ ತುಮ್ಚಿ ದೊಸ್ತಾಚ್ ಧರುನ್ ದಿತ್ಯಾತ್, ಅನಿ ತುಮ್ಚ್ಯಾತ್ಲ್ಯಾ ಉಲ್ಲ್ಯಾತ್ನಿ ಜಿವಾನಿ ಮಾರ್‍ತ್ಯಾತ್. ಅಧ್ಯಾಯವನ್ನು ನೋಡಿ |
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.