ಲೂಕ 21:20 - ಪರಿಶುದ್ದ ಬೈಬಲ್20 “ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 “ಜೆರುಜಲೆಮಾಚ್ಯಾ ಭೊತ್ಯಾನಿ ಸೈನಿಕಾ ಯೆವ್ನ್ ಇಬೆ ಹೊತ್ತ್ಯಾ ತನ್ನಾ, ತೆ, ಲಗ್ಗುನಾಚ್ ನಾಸ್ ಹೊತಾ ಮನುನ್ ತುಮ್ಕಾ ಕಳ್ತಾ. ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.