Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:28 - ಪರಿಶುದ್ದ ಬೈಬಲ್‌

28 ಈ ಸಂಗತಿಗಳು ಸಂಭವಿಸುವುದಕ್ಕೆ ತೊಡಗುವಾಗ ಭಯಪಡಬೇಡಿರಿ. ಮೇಲೆ ನೋಡಿ ಸಂತೋಷಪಡಿರಿ! ಚಿಂತೆಮಾಡಬೇಡಿರಿ. ಸಂತೋಷಪಡಿರಿ, ಏಕೆಂದರೆ ದೇವರು ನಿಮ್ಮನ್ನು ಬಿಡುಗಡೆಗೊಳಿಸುವ ಕಾಲ ಸಮೀಪವಾಗಿದೆ ಎಂಬುದಕ್ಕೆ ಅವು ಸೂಚನೆಯಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ಇವು ಸಂಭವಿಸುವದಕ್ಕೆ ತೊಡಗುವಾಗ ಮೇಲಕ್ಕೆ ನೋಡಿರಿ, ನಿಮ್ಮ ತಲೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಸಂಗತಿಗಳು ಸಂಭವಿಸಲು ತೊಡಗುವಾಗ, ತಲೆಯೆತ್ತಿ ನಿಲ್ಲಿರಿ. ಏಕೆಂದರೆ ನಿಮ್ಮ ವಿಮೋಚನೆಯು ಸಮೀಪಿಸಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ಸಗ್ಳೆ ಹೊವ್ಕ್ ಸುರು ಹೊತಾನಾ, ಉಟುನ್ ಇಬೆ ರ್‍ಹಾವಾ, ಅನಿ ಟಕ್ಲಿ ವೈರ್ ಕರಾ, ಕಶ್ಯಾಕ್ ಮಟ್ಲ್ಯಾರ್ ತುಮ್ಚಿ ಸುಟ್ಕಾ ಜಗ್ಗೊಳ್ ಯೆಲಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:28
11 ತಿಳಿವುಗಳ ಹೋಲಿಕೆ  

ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ದೇವರು ತನ್ನ ಜನರಿಗೆ ವಾಗ್ದಾನ ಮಾಡಿದವುಗಳನ್ನು ನಾವು ಹೊಂದಿಕೊಳ್ಳುತ್ತೇವೆ ಎಂಬುದಕ್ಕೆ ಆ ಪವಿತ್ರಾತ್ಮನೇ ಪ್ರಮಾಣವಾಗಿದ್ದಾನೆ. ದೇವರು ಸಂಪಾದಿಸಿಕೊಂಡ ಜನರಿಗೆ ಇದು ಸಂಪೂರ್ಣ ವಿಮೋಚನೆಯನ್ನು ಉಂಟುಮಾಡುತ್ತದೆ. ದೇವರ ಮಹಿಮೆಗೆ ಸ್ತೋತ್ರವಾಗ ಬೇಕೆಂಬುದೇ ಇದೆಲ್ಲದರ ಉದ್ದೇಶವಾಗಿದೆ.


ದೆವ್ವದಿಂದ ಪೀಡಿತಳಾಗಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆ ದೆವ್ವದಿಂದಾಗಿ ಆಕೆಗೆ ಹದಿನೆಂಟು ವರ್ಷಗಳಿಂದ ನಡು ಬಗ್ಗಿಕೊಂಡಿತ್ತು. ನೆಟ್ಟಗೆ ನಿಂತುಕೊಳ್ಳಲು ಆಕೆಗೆ ಸಾಧ್ಯವಿರಲಿಲ್ಲ.


ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಎಲ್ಲಾ ಮರಗಳಲ್ಲಿ ಅಂಜೂರದ ಮರ ಒಳ್ಳೆಯ ಉದಾಹರಣೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು