Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:4 - ಪರಿಶುದ್ದ ಬೈಬಲ್‌

4 ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಈ ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಆ ಹಣದ ಅವಶ್ಯವಿತ್ತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಗಂದರೆ ಅವರೆಲ್ಲರು ತಮಗೆ ಸಾಕಾಗಿ ವಿುಕ್ಕದ್ದರಲ್ಲಿ ಕಾಣಿಕೆಕೊಟ್ಟರು; ಈಕೆಯೋ ತನ್ನ ಬಡತನದಲ್ಲಿಯೂ ತನಗಿದ್ದ ಜೀವನವನ್ನೆಲ್ಲಾ ಕೊಟ್ಟುಬಿಟ್ಟಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ, ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹುರಲ್ಲ್ಯಾ ಸಗ್ಳ್ಯಾನಿ ಅಪ್ನಾಕ್ ಫಿರೆ ಹೊವ್ನ್ ಹುರಲ್ಲೆ ಲೈ ಲೈ ಪೈಸೆ ಘಾಟ್ಲ್ಯಾನಿ, ಖರೆ ಹಿನಿ ಅಪ್ನಾಚ್ಯಾ ಗರಿಬ್ಕಿತ್ , ಅಪ್ನಾಚೆ ಜಿವನ್ ಚಾಲ್ವುಕ್ ಮನುನ್ ಹೊತ್ತೆ ದೊನುಚ್ ದೊನ್ ಪಯ್ಸೆಬಿ ಅಪ್ನಾಕ್ ಕಾಯ್ಬಿ ಥವ್ನ್ ಘೆಯ್ನಸ್ತಾನಾ, ತೆನಿ ದಿಲಿನ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:4
7 ತಿಳಿವುಗಳ ಹೋಲಿಕೆ  

ಕಿರಿಯ ಮಗನು ತಂದೆಗೆ, ‘ನಿನ್ನ ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಡು’ ಎಂದು ಕೇಳಿದನು. ಆದ್ದರಿಂದ ತಂದೆಯು ತನ್ನ ಆಸ್ತಿಯನ್ನು ಹಂಚಿಕೊಟ್ಟನು.


ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ,


ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.


ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.


ಅದನ್ನು ಕಂಡ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ. ಈ ಬಡ ವಿಧವೆ ಕೇವಲ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಕೊಟ್ಟಳು. ಆದರೆ ಆಕೆ ನಿಜವಾಗಿಯೂ, ಆ ಐಶ್ವರ್ಯವಂತರೆಲ್ಲರಿಗಿಂತ ಹೆಚ್ಚು ಕೊಟ್ಟಳು.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು