Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:33 - ಪರಿಶುದ್ದ ಬೈಬಲ್‌

33 ಅದಕ್ಕೆ ಪೇತ್ರನು ಯೇಸುವಿಗೆ, “ಪ್ರಭುವೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಪೇತ್ರನು, “ಗುರುದೇವಾ, ನಿಮ್ಮ ಸಂಗಡ ಸೆರೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಅವನು - ಸ್ವಾಮೀ, ನಿನ್ನ ಸಂಗಡ ಸೆರೆಮನೆಗೆ ಹೋಗುವದಕ್ಕೂ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಅವನು ಯೇಸುವಿಗೆ, “ಕರ್ತದೇವರೇ, ನಾನು ನಿಮ್ಮ ಜೊತೆಯಲ್ಲಿ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಪೆದ್ರುನ್ “ಧನಿಯಾ, ಮಿಯಾ ತುಜ್ಯಾಸಾಟಿ, ಬಂದಿಖಾನ್ಯಾತ್ ಜವ್ಕ್, ಅನಿ ತುಜೆಸಾಟ್ನಿ ಮರುಕ್ ಸೈತ್ ತಯಾರ್ ಹಾಂವ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:33
16 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.


ಪೇತ್ರನು, “ಉಳಿದ ಶಿಷ್ಯರೆಲ್ಲರು ಭಯಗೊಂಡು ಹಿಂಜರಿದರೂ ನಾನು ಹಿಂಜರಿಯುವುದಿಲ್ಲ” ಎಂದು ಉತ್ತರಿಸಿದನು.


ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು.


“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ.


ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.


ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.


ಆದರೆ ಪೇತ್ರನು ಅದು ನಿಜವಲ್ಲವೆಂದು ಹೇಳಿದನು. ಅವನು ಅಕೆಗೆ, “ಅಮ್ಮಾ, ಆತನು ನನಗೆ ಗೊತ್ತೇ ಇಲ್ಲ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು