Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:34 - ಪರಿಶುದ್ದ ಬೈಬಲ್‌

34 ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಯೇಸು, “ಪೇತ್ರನೇ, ಇಂದು ಕೋಳಿಕೂಗುವ ಮೊದಲೇ ನನ್ನನ್ನು ಅರಿಯೆನೆಂದು ನೀನು ಮೂರು ಬಾರಿ ಬೊಂಕುವೆ, ಇದು ಖಂಡಿತ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನು - ಪೇತ್ರನೇ, ನನ್ನ ವಿಷಯದಲ್ಲಿ - ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವದಿಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಜೆಜುನ್ ಪೆದ್ರುಕ್, ಮಿಯಾ ತುಕಾ ಸಾಂಗ್ತಾ, ಆಜ್ ರಾಚ್ಚೆ ತಿಯಾ, ಮಿಯಾ ಕೊನ್ ಮನುನುಚ್ ತುಕಾ ಗೊತ್ತ್ ನಾ, ಮನುನ್ ತಿನ್‍ದಾ ಸಾಂಗಿ ಪತರ್ ಕೊಂಬೊ ಭೊಕಿನಾ ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:34
9 ತಿಳಿವುಗಳ ಹೋಲಿಕೆ  

ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.


ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.


ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಇಂದು ರಾತ್ರಿ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನ ವಿಷಯದಲ್ಲಿ ಆತನು ನನಗೆ ಗೊತ್ತೇ ಇಲ್ಲ ಎಂಬುದಾಗಿ ಮೂರು ಸಲ ಹೇಳುವೆ” ಅಂದನು.


ಆಗ ಪೇತ್ರನು ಶಪಿಸಿಕೊಳ್ಳತೊಡಗಿ, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಯೇಸುವೆಂಬ ಮನುಷ್ಯನು ನನಗೆ ತಿಳಿದೇ ಇಲ್ಲ!” ಎಂದು ಹೇಳಿದನು. ಆ ಕೂಡಲೇ ಕೋಳಿ ಕೂಗಿತು.


ಆದರೆ ಪೇತ್ರನು ಮತ್ತೆ, “ಇಲ್ಲ, ನಾನು ಆತನೊಂದಿಗೆ ಇರಲಿಲ್ಲ!” ಎಂದನು. ಆ ಕೂಡಲೇ ಕೋಳಿ ಕೂಗಿತು.


ಅದಕ್ಕೆ ಪೇತ್ರನು ಯೇಸುವಿಗೆ, “ಪ್ರಭುವೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಎಂದು ಹೇಳಿದನು.


ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.


ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು