Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:35 - ಪರಿಶುದ್ದ ಬೈಬಲ್‌

35 ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಮಿಯಾ ತುಮ್ಕಾ, ಪೈಸೆ ಘೆವ್‌ನಸ್ತಾನಾ, ಪಿಸ್ವಿ ಘೆವ್‌ನಸ್ತಾನಾ, ನಾ ಹೊಲ್ಯಾರ್, ಹೊನಾಯಾ ನಸ್ತಾನಾ, ಭಾಯ್ರ್ ಧಾಡುನ್ ದಿಲ್ಲೊ ತನ್ನಾ, ತುಮ್ಕಾ ಕಾಯ್ ತರ್ ಕಮಿ ಪಡಲ್ಲೆ ಕಾಯ್? ನಾ ಕಾಯ್ಬಿ ಕಮಿ ಪಡುಕ್ನಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:35
16 ತಿಳಿವುಗಳ ಹೋಲಿಕೆ  

ಕೈಚೀಲವನ್ನಾಗಲಿ ಹಣವನ್ನಾಗಲಿ ಅಥವಾ ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ನಿಂತುಕೊಂಡು ಜನರೊಡನೆ ಮಾತನಾಡಬೇಡಿ.


ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ.


ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.


ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.


ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.


ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.


ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು.


ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು, “ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು