Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:41 - ಪರಿಶುದ್ದ ಬೈಬಲ್‌

41 ಬಳಿಕ ಯೇಸು ಅವರಿಂದ ಸುಮಾರು ನೂರೈವತ್ತು ಅಡಿ ದೂರ ಹೋದನು. ಆತನು ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಒಂದು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ ಪ್ರಾರ್ಥನೆಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸುಗೆಯಷ್ಟು ದೂರ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮಾನಾ ತೊ ತೆಂಚೆಕ್ನಾ ಎಕ್ ಗುಂಡೊ ಮಾರಿ ಸರ್ಕೆ ತವ್ಡೆ ಧುರ್ ಗೆಲೊ, ಅನಿ ಡೊಗ್ಲಾ ಘಾಲುನ್ ಮಾಗ್ನಿ ಕರುನ್ಗೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:41
9 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ಯೇಸು ಅವರಿಂದ ಸ್ವಲ್ಪದೂರ ನಡೆದುಹೋಗಿ ನೆಲದ ಮೇಲೆ ಬೋರಲಬಿದ್ದು, ಪ್ರಾರ್ಥಿಸುತ್ತಾ “ಸಾಧ್ಯವಾದರೆ, ಈ ಸಂಕಟದ ಗಳಿಗೆ ನನಗೆ ಬಾರದಿರಲಿ” ಎಂದು ಬೇಡಿಕೊಂಡನು.


ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.


“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.


ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.


ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಪೌಲನು ಈ ಸಂಗತಿಗಳನ್ನು ಹೇಳಿ ಮುಗಿಸಿದ ಮೇಲೆ ಮೊಣಕಾಲೂರಿ ಅವರೆಲ್ಲರೊಡನೆ ಪ್ರಾರ್ಥಿಸಿದನು.


ಆದರೆ ನಮ್ಮ ಸಂದರ್ಶನವು ಮುಗಿದ ಮೇಲೆ ನಾವು ಅಲ್ಲಿಂದ ಹೊರಟು ಪ್ರಯಾಣವನ್ನು ಮುಂದುವರಿಸಿದೆವು. ಯೇಸುವಿನ ಎಲ್ಲಾ ಶಿಷ್ಯರು, ಸ್ತ್ರೀಯರು ಮತ್ತು ಮಕ್ಕಳು ಸಹ ನಮ್ಮನ್ನು ಬೀಳ್ಕೊಡುವುದಕ್ಕಾಗಿ ನಮ್ಮೊಂದಿಗೆ ಪಟ್ಟಣದಿಂದ ಹೊರಗೆ ಬಂದರು. ನಾವೆಲ್ಲರೂ ಸಮುದ್ರ ತೀರದಲ್ಲಿ ಮೊಣಕಾಲೂರಿ ಪ್ರಾರ್ಥಿಸಿದೆವು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು