Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:5 - ಪರಿಶುದ್ದ ಬೈಬಲ್‌

5 ಯಾಜಕರಿಗೆ ಬಹಳ ಸಂತೋಷವಾಯಿತು. ಯೇಸುವನ್ನು ತಮಗೆ ಹಿಡಿದುಕೊಟ್ಟರೆ ಹಣ ಕೊಡುವುದಾಗಿ ಅವರು ಯೂದನಿಗೆ ಮಾತುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದರಿಂದ ಅವರಿಗೆ ಅತ್ಯಾನಂದವಾಯಿತು. ಅವರು ಹಣಕೊಡುವುದಾಗಿ ವಾಗ್ದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು ಅವನು ಒಡಂಬಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವುದಕ್ಕೆ ವಾಗ್ದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಲೈ ಕುಸಿ ಹೊಲೆ, ಅನಿ ಜುದಾಸಾಕ್ ಪೈಸೆ ದಿವ್ಕ್ ತೆನಿ ತಯಾರ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:5
11 ತಿಳಿವುಗಳ ಹೋಲಿಕೆ  

ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.


(ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.


ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.


ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು