Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:52 - ಪರಿಶುದ್ದ ಬೈಬಲ್‌

52 ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಬಳಿಕ ಯೇಸು ತನ್ನನ್ನು ಹಿಡಿಯುವದಕ್ಕೆ ಬಂದ ಮಹಾಯಾಜಕರಿಗೂ ದೇವಾಲಯದ ಕಾವಲಿನ ದಳವಾಯಿಗಳಿಗೂ ಸಭೆಯ ಹಿರಿಯರಿಗೂ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತನ್ನಾ ಜೆಜುನ್, ಅಪ್ನಾಕ್ ಧರುನ್ ಘೆವ್ನ್ ಜಾವ್ಕ್ ಯೆಲ್ಲ್ಯಾ, ಮುಖ್ಯ ಯಾಜಕಾಕ್ನಿ, ಅನಿ ದೆವಾಚಿ ಗುಡಿ ರಾಕ್ತಲ್ಯಾ ಅದಿಕಾರ್‍ಯಾಕ್ನಿ, ಅನಿ ಜಾನ್ತ್ಯಾಕ್ನಿ “ಎಕ್ ಚೊರಾಕ್ ಧರುಕ್ ಯೆಲ್ಯಾ ಸರ್ಕೆ, ಕೊಯ್ತೆ, ಅನಿ ಟೊನೆ ಘೆವ್ನ್ ಯೆಲ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:52
10 ತಿಳಿವುಗಳ ಹೋಲಿಕೆ  

ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.


ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.


ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.


ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.


ಯಾಜಕನಾದ ಯೆಹೋಯಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋಯಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು.


ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.


‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.


ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.


ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು