Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:56 - ಪರಿಶುದ್ದ ಬೈಬಲ್‌

56 ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಬೆಂಕಿಯ ಬೆಳಕಿನಲ್ಲಿ ಕುಳಿತಿದ್ದ ಆತನನ್ನು ದಾಸಿಯೊಬ್ಬಳು ದೃಷ್ಟಿಸಿ ನೋಡಿ, “ಇವನು ಕೂಡ ಯೇಸುವಿನ ಸಂಗಡ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಅವನು ಬೆಳಕಿಗೆ ಮುಖವಾಗಿ ಕೂತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು ಅವನನ್ನು ದೃಷ್ಟಿಸಿ ನೋಡಿ - ಇವನು ಸಹ ಅವನ ಸಂಗಡ ಇದ್ದವನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಆದರೆ ಒಬ್ಬ ದಾಸಿಯು ಬೆಂಕಿಯ ಬಳಿಯಲ್ಲಿ ಕುಳಿತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ, “ಈ ಮನುಷ್ಯನು ಸಹ ಯೇಸುವಿನ ಸಂಗಡ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಥೈ ಆಗಿಕ್ಡೆ ಬಸಲ್ಲ್ಯಾ ಪೆದ್ರುಕ್ ಎಕ್ ಕಾಮಾಚ್ಯಾ ಬಾಯ್ಕೊಮನ್ಸಿನ್ ಬಗಟ್ಲಿನ್, ತೆನಿ ತೆಕಾ ಬರೆ ಕರುನ್ ಬಗುನ್ “ಹ್ಯೊ , ಮಾನುಸ್‍ಬಿ ಜೆಜುಚ್ಯಾ ವಾಂಗ್ಡಾ ಹೊತ್ತೊ!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:56
8 ತಿಳಿವುಗಳ ಹೋಲಿಕೆ  

ದ್ವಾರಪಾಲಕಿಯು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದಳು. ಪೇತ್ರನು, “ಇಲ್ಲ, ನಾನಲ್ಲ!” ಎಂದು ಉತ್ತರಕೊಟ್ಟನು.


ಸಾಯಂಕಾಲದಲ್ಲಿ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಆ ಮನೆಗೆ ಹೋದನು.


ಯೇಸು, “ಆಕೆಗೆ ತೊಂದರೆ ಕೊಡಬೇಡಿ. ನೀವು ಆಕೆಯನ್ನು ಕಾಡಿಸುವುದೇಕೆ? ಅವಳು ನನಗಾಗಿ ಬಹಳ ಒಳ್ಳೆಯದನ್ನು ಮಾಡಿದಳು.


ಇತ್ತ ಪೇತ್ರನು ಅಂಗಳದಲ್ಲಿ ಕುಳಿತಿದ್ದನು. ಸೇವಕಿಯೊಬ್ಬಳು ಪೇತ್ರನ ಬಳಿಗೆ ಬಂದು, “ನೀನು ಸಹ ಗಲಿಲಾಯದ ಯೇಸುವಿನೊಂದಿಗಿದ್ದವನು” ಎಂದು ಹೇಳಿದಳು.


ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.


ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು.


ಆದರೆ ಪೇತ್ರನು ಅದು ನಿಜವಲ್ಲವೆಂದು ಹೇಳಿದನು. ಅವನು ಅಕೆಗೆ, “ಅಮ್ಮಾ, ಆತನು ನನಗೆ ಗೊತ್ತೇ ಇಲ್ಲ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು