ಲೂಕ 22:61 - ಪರಿಶುದ್ದ ಬೈಬಲ್61 ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಆಗ ಪ್ರಭು ಯೇಸು ಹಿಂದಿರುಗಿ ಪೇತ್ರನನ್ನು ದಿಟ್ಟಿಸಿ ನೋಡಿದರು. “ಈ ದಿನ ಕೋಳಿ ಕೂಗುವ ಮೊದಲೇ, ‘ನಾನು ಆತನನ್ನು ಅರಿಯೆನು,’ ಎಂದು ನನ್ನನ್ನು ಮೂರು ಬಾರಿ ನಿರಾಕರಿಸುವೆ,” ಎಂದು ಯೇಸು ನುಡಿದಿದ್ದ ಮಾತುಗಳು ಪೇತ್ರನ ನೆನಪಿಗೆ ಬಂದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ಸ್ವಾವಿುಯು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು - ಈಹೊತ್ತು ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಸ್ವಾವಿು ನುಡಿದ ಮಾತನ್ನು ನೆನಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಆಗ ಕರ್ತದೇವರು ಹಿಂದಿರುಗಿ ಪೇತ್ರನ ಕಡೆಗೆ ದಿಟ್ಟಿಸಿ ನೋಡಿದರು. “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ,” ಎಂದು ಕರ್ತದೇವರು ತನಗೆ ಹೇಳಿದ್ದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್61 ತನ್ನಾ ಜೆಜು ಪರತ್ಲೊ, ಅನಿ ಸಿದಾ ಪೆದ್ರುಕ್ ಬಗಟ್ಲ್ಯಾನ್, ಅನಿ ಪೆದ್ರುಕ್, ಧನಿಯಾನ್ “ಆಜ್ ರಾಚ್ಚೆ ಕೊಂಬೊ ಭೊಕುಚ್ಯಾ ಅದ್ದಿ ತಿನ್ ದಾ ತಿಯಾ ಮಾಕಾ ವಳ್ಕಿಚ್ ನೈ, ಮನುನ್ ಸಾಂಗ್ತೆ” ಮನುನ್ ಸಾಂಗಟಲ್ಲ್ಯಾ ಗೊಸ್ಟಿಚಿ ಯಾದ್ ಯೆಲಿ. ಅಧ್ಯಾಯವನ್ನು ನೋಡಿ |