Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:62 - ಪರಿಶುದ್ದ ಬೈಬಲ್‌

62 ಬಳಿಕ ಪೇತ್ರನು ಹೊರಗೆ ಹೋಗಿ ಬಹು ದುಃಖದಿಂದ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಹೊರಗೆ ಹೋಗಿ ತುಂಬಾ ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಅವನು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

62 ತನ್ನಾ ಪೆದ್ರು ಭಾಯ್ರ್ ಗೆಲೊ ಅನಿ ವಾಯ್ಟ್ ರಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:62
14 ತಿಳಿವುಗಳ ಹೋಲಿಕೆ  

ಆದ್ದರಿಂದ ತಾನು ದೃಢವಾಗಿ ನಿಂತಿದ್ದೇನೆ ಎಂದು ಯೋಚಿಸುವ ವ್ಯಕ್ತಿಯು ಬೀಳದಂತೆ ಎಚ್ಚರಿಕೆಯಿಂದಿರಬೇಕು.


“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


“ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.


“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.


ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.


ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.


ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು