Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:13 - ಪರಿಶುದ್ದ ಬೈಬಲ್‌

13 ಪಿಲಾತನು ಮಹಾಯಾಜಕರನ್ನೂ ಯೆಹೂದ್ಯನಾಯಕರನ್ನೂ ಇತರ ಜನರನ್ನೂ ಒಟ್ಟಾಗಿ ಕರೆಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತರುವಾಯ ಪಿಲಾತನು ಮುಖ್ಯಯಾಜಕರನ್ನೂ, ಅಧಿಕಾರಿಗಳನ್ನೂ, ಪ್ರಜೆಗಳನ್ನೂ ಒಟ್ಟಾಗಿ ಕರೆಯಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತರುವಾಯ ಪಿಲಾತನು ಮಹಾಯಾಜಕರನ್ನೂ ಅಧಿಕಾರಿಗಳನ್ನೂ ಪ್ರಜೆಗಳನ್ನೂ ಒಟ್ಟಾಗಿ ಕರಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಿಲಾತನು ಮುಖ್ಯಯಾಜಕರನ್ನೂ ಅಧಿಕಾರಿಗಳನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪಿಲಾತಾನ್ ಸಗ್ಳ್ಯಾ ಮುಖ್ಯ ಯಾಜಕಾಕ್ನಿ, ಅದಿಕಾರ್‍ಯಾಕ್ನಿ, ಅನಿ ಲೊಕಾಕ್ನಿ ಎಕಾಕ್ಡೆ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:13
14 ತಿಳಿವುಗಳ ಹೋಲಿಕೆ  

ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ.


ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು. ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.


ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.


ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.


ನಮ್ಮ ನಾಯಕರು ಮತ್ತು ಮಹಾಯಾಜಕರು ಆತನಿಗೆ ಮರಣದಂಡನೆ ವಿಧಿಸಲು ಒಪ್ಪಿಸಿಕೊಟ್ಟು ಶಿಲುಬೆಗೆ ಜಡಿಸಿದರು.


ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು.


ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.


ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ!


ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.


“ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.


ಮರುದಿನ ಯೆಹೂದ್ಯನಾಯಕರು, ಯೆಹೂದ್ಯರ ಹಿರಿಯನಾಯಕರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಲ್ಲಿ ಸಭೆಸೇರಿದರು.


ಆಗ ಪೇತ್ರನು ಪವಿತ್ರಾತ್ಮಭರಿತನಾದನು. ಅವನು ಅವರಿಗೆ, “ಜನನಾಯಕರೇ ಮತ್ತು ಹಿರಿಯನಾಯಕರೇ,


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು