Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:30 - ಪರಿಶುದ್ದ ಬೈಬಲ್‌

30 ಆಗ ಜನರು ಬೆಟ್ಟಕ್ಕೆ, ‘ನಮ್ಮ ಮೇಲೆ ಬೀಳು!’ ಎಂತಲೂ ಗುಡ್ಡಗಳಿಗೆ, ‘ನಮ್ಮನ್ನು ಮುಚ್ಚಿಕೊಳ್ಳಿರಿ!’ ಎಂತಲೂ ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಕಾಲದಲ್ಲಿ ಜನರು - ಬೆಟ್ಟಗಳೇ, ನಮ್ಮ ಮೇಲೆ ಬೀಳಿರಿ; ಗುಡ್ಡಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವರು, “ ‘ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ!” ಗುಡ್ಡಗಳಿಗೆ, “ನಮ್ಮನ್ನು ಮುಚ್ಚಿಕೊಳ್ಳಿರಿ!” ’ ಎಂದು ಹೇಳಲಾರಂಭಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತ್ಯಾ ದಿಸಾತ್ನಿ ಲೊಕಾ ಮೊಟ್ಯಾ-ಮೊಟ್ಯಾ ಮಡ್ಡಿಯಾಕ್ನಿ “ಅಮ್ಚೆ ವರ್‍ತಿ ಯೆವ್ನ್ ಪಡಾ, ಮನ್ತ್ಯಾತ್, ಅನಿ ಬಾರಿಕ್ಲ್ಯಾ ಮಡ್ಡಿಯಾಕ್ನಿ”, ಅಮ್ಕಾ ನಿಪ್ವುನ್ ಸೊಡಾ! ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:30
6 ತಿಳಿವುಗಳ ಹೋಲಿಕೆ  

ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;


ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.


ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.


ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.


ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು


ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು