ಲೂಕ 23:35 - ಪರಿಶುದ್ದ ಬೈಬಲ್35 ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಜನರು ನೋಡುತ್ತಾ ನಿಂತಿದ್ದರು. ಅಲ್ಲಿದ್ದ ಮುಖಂಡರು ಯೇಸುವನ್ನು ಮೂದಲಿಸುತ್ತಾ, “ಇವನು ಇತರರನ್ನು ರಕ್ಷಿಸಿದ; ಇವನು ದೇವರಿಂದಲೇ ಅಭಿಷಿಕ್ತನಾದ ಲೋಕೋದ್ಧಾರಕನು ಮತ್ತು ಅವರಿಂದಲೇ ಆಯ್ಕೆಯಾದವನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಜುದೆವಾಂಚಿ ಮುಖಂಡಾ ಜೆಜುಕ್ “ತೆನಿ ದುಸ್ರ್ಯಾಕ್ನಿ ಹುರ್‍ವುಲ್ಯಾನ್, ಅತ್ತಾ ತೊ ದೆವಾನ್ ಎಚುನ್ ಕಾಡಲ್ಲೊ ಮೆಸ್ಸಿಯಾ ಹೊಯ್ ಜಾಲ್ಯಾರ್, ಅಪ್ನಾಕುಚ್ ಹುರ್‍ವುನ್ ಘೆಂವ್ದಿ!” ಮನುನ್ ಎಡ್ಸಡ್ತಲೆ ಥೈ ಇಬೆ ಹೊತ್ತಿ ಸಗ್ಳಿ ಲೊಕಾ ಬಗುಲಾಲ್ಲಿ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.