Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:7 - ಪರಿಶುದ್ದ ಬೈಬಲ್‌

7 ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸುಸ್ವಾಮಿ ಹೆರೋದನ ಆಧಿಪತ್ಯಕ್ಕೆ ಒಳಪಟ್ಟವರೆಂದು ತಿಳಿದುಕೊಂಡು ಅವರನ್ನು ಆತನ ಬಳಿಗೆ ಕಳುಹಿಸಿದನು. ಹೆರೋದನು ಅದೇ ಸಮಯಕ್ಕೆ ಜೆರುಸಲೇಮಿಗೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳುಕೊಂಡು ಆತನನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿವಸಗಳಲ್ಲಿ ಯೆರೂಸಲೇವಿುನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ಹೆರೋದನ ಅಧಿಕಾರಕ್ಕೆ ಸಂಬಂಧ ಪಟ್ಟವನೆಂದು ತಿಳಿದ ಕೂಡಲೇ ಅದೇ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಯೇಸುವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜೆಜು ಹೆರೊದಾಚ್ಯಾ ಅದಿಕಾರಾತ್ ಹೊತ್ತ್ಯಾ ಜಾಗ್ಯಾವೈಲೊ ಮನುನ್ ಕಳಲ್ಲ್ಯಾ ತನ್ನಾ, ಪಿಲಾತಾನ್ ಜೆಜುಕ್ ಹೆರೊದಾಕ್ಡೆ ಧಾಡುನ್ ದಿಲ್ಯಾನ್. ತನ್ನಾ ಹೆರೊದ್ ಜೆರುಜಲೆಮಾತುಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:7
9 ತಿಳಿವುಗಳ ಹೋಲಿಕೆ  

ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.


ಆ ಸಮಯದಲ್ಲಿ ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು, “ಇಲ್ಲಿಂದ ಹೋಗಿ ಅಡಗಿಕೊ! ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ!” ಎಂದು ಹೇಳಿದರು.


ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು.


ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ.


ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು.


ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.


ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು.


ಪಿಲಾತನು ಇದನ್ನು ಕೇಳಿ, “ಇವನು ಗಲಿಲಾಯದವನೋ?” ಎಂದು ಕೇಳಿದನು.


ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು