ಲೂಕ 24:19 - ಪರಿಶುದ್ದ ಬೈಬಲ್19 ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತನ್ನಾ ತೆನಿ,“ ಕಾಯ್ ಹೊಲೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ನಜರೆತಾಚ್ಯಾ ಜೆಜುಕ್ ಹೊಲ್ಲೆ.” ಮನುನ್ ಜಬಾಬ್ ದಿಲ್ಯಾನಿ. “ದೆವಾನ್ ಅನಿ ಮಾನ್ಸಾನಿ ಹ್ಯೊ ಮಾನುಸ್ ಎಕ್ ಪ್ರವಾದಿ ಮನುನ್ ಮಾನಲ್ಲೊ ಹೊತ್ತೊ, ಸಗ್ಳ್ಯಾ ರಿತಿನ್ ತೆಕಾ ಸಗ್ಳೊ ಬಳ್ ಹೊತ್ತೊ, ತೆನಿ ಅಪ್ನಿ ಸಾಂಗ್ಲ್ಯಾನ್ ಅನಿ ತಸೆಚ್ ಕರುನ್ ದಾಕ್ವುಲ್ಯಾನ್”. ಅಧ್ಯಾಯವನ್ನು ನೋಡಿ |