Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:23 - ಪರಿಶುದ್ದ ಬೈಬಲ್‌

23 ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, ‘ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,’ ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನ ದೇಹವನ್ನು ಕಾಣದೆ ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ ಆತನು ಬದುಕುತ್ತಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಲ್ಲಿ ಅವರು ಯೇಸುವಿನ ದೇಹವನ್ನು ಕಾಣದೆ ಬಂದು, ಯೇಸು ಜೀವದಿಂದ ಎದ್ದಿದ್ದಾರೆ, ಎಂದು ಹೇಳಿದ ದೇವದೂತರನ್ನೂ ಕಂಡಿದ್ದ ದೃಶ್ಯವನ್ನೂ ನಮಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ತೆಂಕಾ ತೆಚೆ ಮಡೆಚ್ ದಿಸುಕ್ನಾ. ತೆನಿ ಯೆಲ್ಯಾನಿ, ಅನಿ ಅಪ್ನಾಕ್ ದೆವಾಚಿ ದುತಾ ದಿಸ್ಲಿ, ಅನಿ ತೆನಿ ತೊ ಝಿತ್ತೊ ಹಾಯ್ ಮನುನ್ ಸಾಂಗಟ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:23
6 ತಿಳಿವುಗಳ ಹೋಲಿಕೆ  

ಇಂದು ನಮ್ಮ ಕೆಲವು ಸ್ತ್ರೀಯರು ಆಶ್ಚರ್ಯಕರವಾದ ಸಂಗತಿಗಳನ್ನು ಹೇಳಿದರು. ಮುಂಜಾನೆ ಬೆಳಗಾಗುವಾಗ, ಯೇಸುವಿನ ದೇಹವನ್ನು ಇಟ್ಟಿದ್ದ ಸಮಾಧಿಯ ಬಳಿಗೆ ಆ ಸ್ತ್ರೀಯರು ಹೋಗಿದ್ದರು.


ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು.


ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಹೋಗಿ, “ನಾನು ಪ್ರಭುವನ್ನು ಕಂಡೆನು!” ಎಂದು ಹೇಳಿದಳು. ಮತ್ತು ಯೇಸು ಹೇಳಿದ ಸಂಗತಿಗಳನ್ನು ಆಕೆ ಅವರಿಗೆ ತಿಳಿಸಿದಳು.


ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ.


ಯೇಸು ಬದುಕಿರುವುದಾಗಿಯೂ ತಾನು ಆತನನ್ನು ನೋಡಿದ್ದಾಗಿಯೂ ಮರಿಯಳು ತಿಳಿಸಿದಾಗ ಶಿಷ್ಯರು ಅವಳನ್ನು ನಂಬಲಿಲ್ಲ.


ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು