Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:28 - ಪರಿಶುದ್ದ ಬೈಬಲ್‌

28 ಅವರು ಎಮ್ಮಾಹು ಊರಿನ ಹತ್ತಿರಕ್ಕೆ ಬಂದಾಗ ಆತನು ತಾನು ಅಲ್ಲಿ ಇಳಿದುಕೊಳ್ಳದವನಂತೆ ನಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸುಸ್ವಾಮಿ ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಇನ್ನೂ ಮುಂದಕ್ಕೆ ಹೋಗುವವನಂತೆ ಕಾಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸಮೀಪಿಸುತ್ತಿದ್ದಾಗ, ಯೇಸು ಮುಂದೆ ಹೋಗುವವರಂತೆ ವರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆನಿ ಜಾವ್ಲಾಗಲ್ಲ್ಯಾ ಗಾಂವಾಂಚ್ಯಾ ಜಗ್ಗೊಳ್ ಯೆವ್ನ್ ಪಾವಲ್ಲ್ಯಾ ತನ್ನಾ ಜೆಜುನ್ ಅಪ್ನಿ ಫಿಡೆ ಜಾತಲ್ಯಾ ಸರ್ಕೆ ಕರುನ್ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:28
5 ತಿಳಿವುಗಳ ಹೋಲಿಕೆ  

ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.


ಯೋಸೇಫನು ಅವರನ್ನು ಕಂಡು, ತನ್ನ ಅಣ್ಣಂದಿರೆಂದು ತಿಳಿದುಕೊಂಡನು. ಆದರೂ ಅವನು ತನಗೆ ಅವರು ಗೊತ್ತೇ ಇಲ್ಲದಂತೆ ಅವರೊಂದಿಗೆ ಕಟುವಾಗಿ ಮಾತಾಡಿ, ಅವರಿಗೆ, “ನೀವು ಎಲ್ಲಿಂದ ಬಂದಿರುವಿರಿ?” ಎಂದು ಕೇಳಿದನು. ಸಹೋದರರು, “ಆಹಾರವನ್ನು ಕೊಂಡುಕೊಳ್ಳಲು ಕಾನಾನ್ ದೇಶದಿಂದ ಬಂದಿದ್ದೇವೆ” ಎಂದು ಉತ್ತರಿಸಿದರು.


ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.


ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ಈ ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು.


ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು