Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:29 - ಪರಿಶುದ್ದ ಬೈಬಲ್‌

29 ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ತೆನಿ ತೆಕಾ ಬಲ್ವುಲ್ಯಾನಿ,ಅನಿ “ ಅತ್ತಾ ದಿಸ್ ಬುಡುಕ್ ಯೆಲೊ, ಅನಿ ಅತ್ತಾ ಮಟ್ಲ್ಯಾರ್ ಕಾಳೊಕ್ ಹೊತಾ, ಖೈ ಜಾತೆ,”ಯೆ, ಅನಿ ಅಮ್ಚ್ಯಾ ವಾಂಗ್ಡಾ ರ್‍ಹಾ ಮನುನ್ ಲೈ ಮಾಗ್ಲ್ಯಾನಿ. ತೊ ತೆಂಚ್ಯಾ ವಾಂಗ್ಡಾ ರ್‍ಹಾವ್‍ಸಾಟ್ನಿ ಮನುನ್ ತೆಂಚ್ಯಾ ವಾಂಗ್ಡಾ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:29
6 ತಿಳಿವುಗಳ ಹೋಲಿಕೆ  

ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಪ್ರಮುಖಳಾದ ಸ್ತ್ರೀಯೊಬ್ಬಳು ಶೂನೇಮಿನಲ್ಲಿ ವಾಸಿಸುತ್ತಿದ್ದಳು. ಆ ಸ್ತ್ರೀಯು ತನ್ನ ಮನೆಯಲ್ಲಿ ಊಟಮಾಡಿಕೊಂಡು ಹೋಗುವಂತೆ ಎಲೀಷನನ್ನು ಕೇಳಿಕೊಂಡಳು. ಅಂದಿನಿಂದ ಎಲೀಷನು ಆ ಸ್ಥಳದ ಮೂಲಕ ಹೋಗುವಾಗಲೆಲ್ಲಾ ಅವಳ ಮನೆಯಲ್ಲಿ ಊಟಮಾಡುತ್ತಿದ್ದನು.


ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.


ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.


ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.


ಅವರು ಎಮ್ಮಾಹು ಊರಿನ ಹತ್ತಿರಕ್ಕೆ ಬಂದಾಗ ಆತನು ತಾನು ಅಲ್ಲಿ ಇಳಿದುಕೊಳ್ಳದವನಂತೆ ನಟಿಸಿದನು.


ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು