ಲೂಕ 24:32 - ಪರಿಶುದ್ದ ಬೈಬಲ್32 ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತನ್ನಾ ತೆನಿ ಎಕಾಮೆಕಾಕ್ನಿ,“ ವಾಟೆನ್ ಯೆತಾನಾ ತೊ ಅಮ್ಚೆಕ್ಡೆ ಬೊಲುನ್ಗೆತ್ ಪವಿತ್ರ್ ಪುಸ್ತಕಾಚ್ಯಾ ವಿಶಯಾತ್ ಸಾಂಗುನ್ಗೆತ್ ಯೆತಾನಾ, ಅಮ್ಚ್ಯಾ ಭುತ್ತುರುಚ್ ಎಕ್ ಆಗ್ ಪೆಟ್ಲ್ಯಾ ಸರ್ಕೆ ಹೊಯ್ನಶಿ ಕಾಯ್?” ಮನುನ್ ಬೊಲ್ಲ್ಯಾನಿ. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.