Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:38 - ಪರಿಶುದ್ದ ಬೈಬಲ್‌

38 ಆದರೆ ಯೇಸು, “ನೀವು ಏಕೆ ಗಲಿಬಿಲಿಗೊಂಡಿದ್ದೀರಿ? ನೀವು ಕಣ್ಣಾರೆ ಕಂಡರೂ ಏಕೆ ಸಂಶಯಪಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆಗ ಯೇಸು, “ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ಅವರಿಗೆ - ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯದಲ್ಲಿ ಅನುಮಾನಗಳು ಹುಟ್ಟುವದೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ, ನಾನೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ಯೇಸು ಅವರಿಗೆ, “ಏಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಸಂಶಯಗಳು ಹುಟ್ಟುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಖರೆ ಜೆಜುನ್ ತೆಂಕಾ,“ ತುಮಿ ಅಶೆ ಕಾಯ್ ಭೆದ್ರಕ್ ಸರ್ಕೆ ಇಬೆ ರ್‍ಹಾಲ್ಯಾಶಿ, ಅನಿ ಹ್ಯೊ ಸಂಶೆವ್ ತುಮ್ಚ್ಯಾ ಮನಾತ್ನಿ ಕಶ್ಯಾಕ್ ಯೆವ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:38
7 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ,


ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.


ಆಗ ನನಗೊಂದು ಕನಸು ಬಿತ್ತು. ಅದು ನನ್ನಲ್ಲಿ ಭಯವನ್ನುಂಟುಮಾಡಿತು. ನಾನು ನನ್ನ ಹಾಸಿಗೆಯ ಮೇಲೆ ಮಲಗಿದ್ದೆ. ಅನೇಕ ಚಿತ್ರಗಳನ್ನು ಮತ್ತು ದೃಶ್ಯಗಳನ್ನು ಕಂಡೆ. ಅವುಗಳು ನನ್ನಲ್ಲಿ ಹೆಚ್ಚಿನ ಭಯವನ್ನುಂಟುಮಾಡಿದವು.


ಆಗ ಶಿಷ್ಯರು ಬೆರಗಾದರು. ಅವರಿಗೆ ಭಯವಾಯಿತು. ಅದು ಭೂತವೇ ಇರಬೇಕೆಂದು ಅವರು ಭಾವಿಸಿದರು.


ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು