Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:50 - ಪರಿಶುದ್ದ ಬೈಬಲ್‌

50 ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಮತ್ತು ಆತನು ಅವರನ್ನು ಬೇಥಾನ್ಯದ ತನಕ ಕರಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಮಾನಾ ತೆನಿ ತೆಂಕಾ ಶಾರಾಚ್ಯಾ ಭಾಯ್ರ್ ಬೆಥನಿಯಾ ಎವ್ಡ್ಯಾ ಧುರ್ ಘೆವ್ನ್ ಜಾವ್ನ್ ಥೈ ಅಪ್ನಾಚಿ ಹಾತಾ ವೈರ್ ಕರುನ್, ತೆಂಕಾ ಆಶಿರ್ವಾದ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:50
15 ತಿಳಿವುಗಳ ಹೋಲಿಕೆ  

ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)


ಬಳಿಕ ಆತನು ಆ ಸ್ಥಳವನ್ನು ಬಿಟ್ಟು ಬೆಥಾನಿ ಪಟ್ಟಣಕ್ಕೆ ಹೊರಟುಹೋದನು. ಯೇಸು ಆ ರಾತ್ರಿ ಅಲ್ಲಿಯೇ ತಂಗಿದನು.


ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು.


ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು,


ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು.


ಯೋಸೇಫನು ತನ್ನ ತಂದೆಗೆ, “ಇವರು ನನ್ನ ಮಕ್ಕಳು. ದೇವರು ನನಗೆ ಕೊಟ್ಟಿರುವ ಗಂಡುಮಕ್ಕಳೇ ಇವರು” ಎಂದು ಹೇಳಿದನು. ಇಸ್ರೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ನಾನು ಅವರನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.


ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.


ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.


ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು.


ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು.


ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.


ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು