Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:11 - ಪರಿಶುದ್ದ ಬೈಬಲ್‌

11 ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತೆಂಕಾ “ಕೊನಾಕ್ಡೆ ದೊನ್ ಅಂಗಿಯಾ ಹಾತ್, ತೊ ಕಾಯ್ಬಿನಸಲ್ಲ್ಯಾಕ್ ಎಕ್ ಅಂಗಿ ದಿಂವ್ದಿ, ಅನಿ ಕೊನಾಕ್ಡೆ ಜೆವ್ಕ್ ಹಾಯ್, ತೊ ವಾಟುನ್ ಘೆವ್ನ್ ಖಾಂವ್ದಿ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:11
22 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.


“ನಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿಕೊಳ್ಳುವವನು ತನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ದ್ವೇಷಿಸಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನು ತನ್ನ ಸಹೋದರನನ್ನು ಕಣ್ಣಾರೆ ನೋಡುತ್ತಿದ್ದರೂ ಅವನನ್ನು ದ್ವೇಷಿಸುತ್ತಾನೆ. ಆದ್ದರಿಂದ ಅವನು ದೇವರನ್ನು ಪ್ರೀತಿಸಲಾಗುವುದಿಲ್ಲ. ಏಕೆಂದರೆ ಅವನು ದೇವರನ್ನು ಎಂದೂ ನೋಡಿಲ್ಲ!


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.


ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು