ಲೂಕ 3:16 - ಪರಿಶುದ್ದ ಬೈಬಲ್16 ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ಉತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೋಹಾನನು ಅವರೆಲ್ಲರಿಗೆ - ನಾನಂತೂ ನಿಮಗೆ ನೀರಿನ ಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮದಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆಚೆಸಾಟ್ನಿ ಜುವಾಂವಾಕ್ ತೆಂಕಾ “ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ ಖರೆ ಮಾಜ್ಯಾ ಮಾನಾ ಎಕ್ಲೊ ಯೆತಲೊ ಹಾಯ್ ತೊ ಮಾಜೆನ್ಕಿ ಲೈ ಮೊಟೊ, ತೆಚ್ಯಾ ವ್ಹಾನಾಚಿ ನಾಡಿ ಸೊಡ್ತಲಿ ಸೈತ್ ಮಾಕಾ ಮರ್‍ಯಾದ್ ನಾ, ತೊ ತುಮ್ಕಾ ಪವಿತ್ರ್ ಆತ್ಮ್ಯಾನ್ ಅನಿ ಆಗಿನ್ ಬಾಲ್ತಿಮ್ ದಿತಾ. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”