Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:17 - ಪರಿಶುದ್ದ ಬೈಬಲ್‌

17 ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಳ್ಳುವದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆನಿ ತೆಚೆ ಸುಪ್ಪ್ ಹಾತಿತ್ ಧರ್‍ಲ್ಯಾನಾಯ್, ತೊ ಅಪ್ಲೆ ಖಳ್ಯಾತ್ಲೆ ದಾನೆ ಫಾಪಡ್ತಾ, ಅನಿ ಘವ್ ಅಪ್ನಾಚ್ಯಾ ದಾನೆ ಥವ್ತಲ್ಯಾ ತಟ್ಟ್ಯಾತ್ ಭರುನ್ ಥವ್ತಾ, ಖರೆ, ಜೊಳ್ಳ್ ಕನ್ನಾಚ್ ಇಜಿನಸಲ್ಲ್ಯಾ ಆಗಿತ್ ಘಾಲುನ್ ಜಾಳ್ವುತಾ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:17
9 ತಿಳಿವುಗಳ ಹೋಲಿಕೆ  

ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”


ಅವರು ತಮ್ಮ ಯೋಜನೆಯನ್ನು ಹಾಕುತ್ತಾರೆ. ಆದರೆ ಯೆಹೋವನ ಯೋಜನೆಯೇನೆಂದು ಅವರು ಅರಿಯರು. ಯೆಹೋವನು ತನ್ನ ಜನರನ್ನು ಒಂದು ವಿಶೇಷ ಉದ್ದೇಶಕ್ಕಾಗಿ ಇಲ್ಲಿಗೆ ತಂದಿದ್ದಾನೆ. ಆ ಜನರು ಕಣಕ್ಕೆ ಹಾಕಿದ ಸಿವುಡುಗಳಂತೆ ನಜ್ಜುಗುಜ್ಜಾಗುವರು.


ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.


ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ನಿಮ್ಮ ದನಕರುಗಳಿಗೂ ಕತ್ತೆಗಳಿಗೂ ಬೇಕಾದಷ್ಟು ಮೇವಿದೆ. ಆಹಾರವು ಯಥೇಚ್ಛವಾಗಿರುವದು. ನಿಮ್ಮ ದನಕರುಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.


ಯೋಹಾನನು ಜನರಿಗೆ ಇನ್ನೂ ಅನೇಕ ವಿಷಯಗಳನ್ನು ಹೇಳಿ ಪ್ರೋತ್ಸಾಹಿಸುತ್ತಾ ಸುವಾರ್ತೆಯನ್ನು ಬೋಧಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು