Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:18 - ಪರಿಶುದ್ದ ಬೈಬಲ್‌

18 ಯೋಹಾನನು ಜನರಿಗೆ ಇನ್ನೂ ಅನೇಕ ವಿಷಯಗಳನ್ನು ಹೇಳಿ ಪ್ರೋತ್ಸಾಹಿಸುತ್ತಾ ಸುವಾರ್ತೆಯನ್ನು ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಶುಭವಾರ್ತೆಯನ್ನು ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ಯೊವಾನ್ನನು ನಾನಾ ವಿಧಗಳಲ್ಲಿ ಪ್ರಬೋಧಿಸುತ್ತಾ ಜನರಿಗೆ ಶುಭಸಂದೇಶವನ್ನು ಸಾರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇನ್ನು ಬೇರೆ ಅನೇಕ ಮಾತುಗಳಿಂದ ಅವನು ಇಸ್ರಾಯೇಲ್ ಜನರಿಗೆ ಬುದ್ಧಿ ಹೇಳಿ ಸುವಾರ್ತೆಯನ್ನು ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋಹಾನನು ಇನ್ನೂ ಅನೇಕ ರೀತಿಗಳಿಂದ ಜನರನ್ನು ಎಚ್ಚರಿಸಿ ಅವರಿಗೆ ಸುವಾರ್ತೆಯನ್ನು ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ದುಸ್ರ್ಯಾ-ದುಸ್ರ್ಯಾ ರಿತಿನ್ ಜುವಾಂವಾಕ್ ಲೊಕಾಕ್ನಿ ಬರಿ ಖಬರ್ ಸಾಂಗ್ಲ್ಯಾನ್, ಅನಿ ಲೊಕಾನಿ ತೆಂಚಿ ಮನಾ ಬದ್ಲಿ ಸಾರ್ಕೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:18
9 ತಿಳಿವುಗಳ ಹೋಲಿಕೆ  

ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.


ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು.


ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು.


ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು