ಲೂಕ 3:21 - ಪರಿಶುದ್ದ ಬೈಬಲ್21 ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಲ್ಲಿ ಆಕಾಶವು ತೆರೆಯಿತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಸಗ್ಳ್ಯಾ ಲೊಕಾಕ್ನಿ ಬಾಲ್ತಿಮ್ ದಿವ್ನ್ ಹೊಲ್ಲ್ಯಾ ತನ್ನಾ ಜೆಜುನ್‍ಬಿ ಬಾಲ್ತಿಮ್ ಘೆಟ್ಲ್ಯಾನ್, ಜೆಜು ಮಾಗ್ನಿ ಕರ್‍ತಾನಾ ಮಳಬ್ ಉಗಡ್ಲೊ ಅಧ್ಯಾಯವನ್ನು ನೋಡಿ |
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.