Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:32 - ಪರಿಶುದ್ದ ಬೈಬಲ್‌

32 ದಾವೀದನು ಇಷಯನ ಮಗನು. ಇಷಯನು ಓಬೇದನ ಮಗನು. ಓಬೇದನು ಬೋವಜನ ಮಗನು. ಬೋವಜನು ಸಲ್ಮೋನನ ಮಗನು. ಸಲ್ಮೋನನು ನಹಸ್ಸೋನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದಾವೀದ್ ಜೆಸ್ಸೆಯನಿಗೆ, ಜೆಸ್ಸೆಯ ಓಬೇದನಿಗೆ, ಓಬೇದ್ ಬೋವಜನಿಗೆ, ಬೋವಜ್ ಸಲ್ಮೋನನಿಗೆ, ಸಲ್ಮೋನ್ ನಹಸ್ಸೋನನಿಗೆ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇವನು ಇಶಾಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದಾವೀದನು ಇಷಯನ ಮಗನು, ಇಷಯನು ಓಬೇದನ ಮಗನು, ಓಬೇದನು ಬೋವಜನ ಮಗನು, ಬೋವಜನು ಸಲ್ಮೋನನ ಮಗನು, ಸಲ್ಮೋನನು ನಹಶೋನನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ದಾವಿದ್ ಜಸ್ಸೆಚೊ ಲೆಕ್, ಜಸ್ಸೆ ಒಬೆದಾಚೊ ಲೆಕ್, ಒಬೆದ್ ಬೊಆಜಾಚೊ ಲೆಕ್, ಬೊಅಜ್ ಸಲ್ಮೊನಾಚೊ ಲೆಕ್, ಸಲ್ಮೊನ್ ನಾಅಸೊನಾಚೊ ಲೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:32
16 ತಿಳಿವುಗಳ ಹೋಲಿಕೆ  

(ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು.)


ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.


ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.


ಹನ್ನೆರಡು ಪ್ರಧಾನರಲ್ಲಿ ಪ್ರತಿಯೊಬ್ಬನೂ ತನ್ನ ಕಾಣಿಕೆಯನ್ನು ತಂದನು. ಅವರು ಕೊಟ್ಟ ಕಾಣಿಕೆಗಳು ಹೀಗಿವೆ: ಪ್ರತಿಯೊಬ್ಬ ಪ್ರಧಾನನು ಮೂರುಕಾಲು ಪೌಂಡು ತೂಕವುಳ್ಳ ಬೆಳ್ಳಿಯ ತಟ್ಟೆಯನ್ನೂ ಒಂದು ಮುಕ್ಕಾಲು ಪೌಂಡು ತೂಕವುಳ್ಳ ಬೆಳ್ಳಿಯ ಬಟ್ಟಲನ್ನೂ ತಂದನು. ಇವೆರಡನ್ನೂ ಅಧಿಕೃತ ಅಳತೆಯಿಂದ ತೂಕ ಮಾಡಲಾಯಿತು. ಧಾನ್ಯಸಮರ್ಪಣೆಗಾಗಿ ಉಪಯೋಗವಾಗುವ ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟನ್ನು ಬಟ್ಟಲಲ್ಲಿ ಮತ್ತು ತಟ್ಟೆಯಲ್ಲಿ ತುಂಬಿಡಲಾಗಿತ್ತು. ಧೂಪದ್ರವ್ಯ ತುಂಬಿದ್ದ ನಾಲ್ಕು ತೊಲೆ ತೂಕವುಳ್ಳ ಚಿನ್ನದ ಧೂಪಾರತಿಯನ್ನೂ ಒಂದು ಎಳೆಯ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಗಂಡು ಕುರಿಮರಿಯನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಎರಡು ಎತ್ತುಗಳನ್ನೂ ಐದು ಟಗರುಗಳನ್ನೂ ಐದು ಹೋತಗಳನ್ನೂ ಒಂದು ವರ್ಷದ ಐದು ಗಂಡು ಕುರಿಮರಿಗಳನ್ನೂ ಪ್ರತಿಯೊಬ್ಬ ಯಾಜಕನೂ ತಂದನು. ಇವೆಲ್ಲವೂ ಯಜ್ಞವಾಗಿ ಸಮರ್ಪಿಸಲ್ಪಟ್ಟವು. ಮೊದಲನೆಯ ದಿನದಲ್ಲಿ ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು ತನ್ನ ಕಾಣಿಕೆಗಳನ್ನು ತಂದನು. ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗನಾದ ನೆತನೇಲನು ತನ್ನ ಕಾಣಿಕೆಗಳನ್ನು ತಂದನು. ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗನಾದ ಎಲೀಯಾಬನು ತನ್ನ ಕಾಣಿಕೆಗಳನ್ನು ತಂದನು. ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿ ಶೆದೇಯೂರನ ಮಗನಾದ ಎಲೀಚೂರನು ತನ್ನ ಕಾಣಿಕೆಗಳನ್ನು ತಂದನು. ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿ ಚೂರೀಷದ್ದೈಯ ಮಗನಾದ ಶೆಲುಮೀಯೇಲನು ತನ್ನ ಕಾಣಿಕೆಗಳನ್ನು ತಂದನು. ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿ ದೆಗೂವೇಲನ ಮಗನಾದ ಎಲ್ಯಾಸಾಫನು ತನ್ನ ಕಾಣಿಕೆಗಳನ್ನು ತಂದನು. ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿ ಅಮ್ಮೀಹೂದನ ಮಗನಾದ ಎಲೀಷಾಮನು ತನ್ನ ಕಾಣಿಕೆಗಳನ್ನು ತಂದನು. ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ತನ್ನ ಕಾಣಿಕೆಗಳನ್ನು ತಂದನು. ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿ ಗಿದ್ಯೋನಿಯ ಮಗನಾದ ಅಬೀದಾನನು ತನ್ನ ಕಾಣಿಕೆಗಳನ್ನು ತಂದನು. ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿ ಅಮ್ಮೀಷದ್ದೈನ ಮಗನಾದ ಅಹೀಗೆಜರನು ತನ್ನ ಕಾಣಿಕೆಗಳನ್ನು ತಂದನು. ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿ ಒಕ್ರಾನನ ಮಗನಾದ ಪಗೀಯೇಲನು ತನ್ನ ಕಾಣಿಕೆಗಳನ್ನು ತಂದನು. ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿ ಏನಾನನ ಮಗನಾದ ಅಹೀರನು ತನ್ನ ಕಾಣಿಕೆಗಳನ್ನು ತಂದನು.


ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್;


ಸೌಲನು, “ಯುವಕನೇ, ನಿನ್ನ ತಂದೆ ಯಾರು?” ಎಂದು ಪ್ರಶ್ನಿಸಿದನು. ದಾವೀದನು, “ನಾನು ನಿಮ್ಮ ಸೇವಕನಾದ ಬೆತ್ಲೆಹೇಮಿನ ಇಷಯನ ಮಗ” ಎಂದು ಉತ್ತರಿಸಿದನು.


“ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನ.


ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಎಲಿಯಕೀಮನು ಮೆಲೆಯನ ಮಗನು. ಮೆಲೆಯನು ಮೆನ್ನನ ಮಗನು. ಮೆನ್ನನು ಮತ್ತಾಥನ ಮಗನು. ಮತ್ತಾಥನು ನಾತಾನನ ಮಗನು. ನಾತಾನನು ದಾವೀದನ ಮಗನು.


ನಹಸ್ಸೋನನು ಅಮ್ಮಿನಾದ್ವಾನ ಮಗನು. ಅಮ್ಮಿನಾದ್ವಾನು ಅದ್ಮಿನನ ಮಗನು. ಅದ್ಮಿನನು ಅರ್ನೈಯನ ಮಗನು. ಅರ್ನೈಯನು ಹೆಸ್ರೋನನ ಮಗನು. ಹೆಸ್ರೋನನು ಪೆರೆಸನ ಮಗನು. ಪೆರೆಸನು ಯೂದನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು