Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:4 - ಪರಿಶುದ್ದ ಬೈಬಲ್‌

4 ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ: “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ. ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-6 ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ : “ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ’ ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-6 ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನಂದರೆ - ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಡೊಂಕಾಗಿರುವಂಥದು ನೀಟಾಗುವದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬದಾಗಿ ಅಡವಿಯಲ್ಲಿ ಕೂಗುವವನ ಶಬ್ಧವದೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಇಸಾಯಿಯಾ ಪ್ರವಾದ್ಯಾಚ್ಯಾ ಪುಸ್ತಕಾತ್: “ಡಂಗ್ಳಿತ್ ಎಕ್ಲೊ ಬೊಬ್ ಮಾರ್‍ತಾ, ಧನಿಯಾಸಾಟ್ನಿ ವಾಟ್ ತಯಾರ್ ಕರುನ್ ಥವಾ” “ತೆಕಾ ಯೆವ್ಕ್ ಎಕ್ ನಿಟ್ ವಾಟ್ ತಯಾರ್ ಕರಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:4
12 ತಿಳಿವುಗಳ ಹೋಲಿಕೆ  

ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು.


ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.


“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.


ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು, ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶಮಾಡುವೆನು.”


ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.


“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ, ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.”


ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು