8 ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.
8 ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.
8 ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.
8 ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.
8 ಹಾಗಾದರೆ ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
“ನರಪುತ್ರನೇ, ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳಲ್ಲಿ ಇಸ್ರೇಲ್ ಜನರು ವಾಸಿಸುತ್ತಿದ್ದಾರೆ. ಅವರು ಹೇಳುವುದೇನೆಂದರೆ, ‘ಅಬ್ರಹಾಮನು ಒಬ್ಬನೇ. ಈ ದೇಶವನ್ನೆಲ್ಲಾ ದೇವರು ಅವನಿಗೆ ಕೊಟ್ಟನು. ನಾವು ಈಗ ಬಹಳ ಮಂದಿ ಇದ್ದೇವೆ. ಆದ್ದರಿಂದ ಖಂಡಿತವಾಗಿ ಈ ದೇಶ ನಮಗೇ ಸೇರಿದ್ದಾಗಿದೆ.’
ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.
ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.
ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ‘ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು’ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.
ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.