ಲೂಕ 4:25 - ಪರಿಶುದ್ದ ಬೈಬಲ್25 “ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಎಲಿಯಾ ಪ್ರವಾದ್ಯಾಚ್ಯಾ ಎಳಾರ್ ಇಸ್ರಾಯೆಲಾತ್ ಲೈ ಘವ್ ನಸಲ್ಲ್ಯಾ ಬಾಯ್ಕಾಮನ್ಸಾ ಹೊತ್ತ್ಯಾ, ಸಾಡೆ ತಿನ್ ವರ್ಸಾ ಪಾವ್ಸ್ ನಸ್ತಾನಾ ಸಗ್ಳ್ಯಾ ದೆಶಾತ್ ಬರಗಾಲ್ ಪಡಲ್ಲೊ. ಅಧ್ಯಾಯವನ್ನು ನೋಡಿ |
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.