Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:28 - ಪರಿಶುದ್ದ ಬೈಬಲ್‌

28 ಸಭಾಮಂದಿರದಲ್ಲಿದ್ದ ಜನರೆಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಕೋಪಗೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸಭಾಮಂದಿರದಲ್ಲಿರುವವರೆಲ್ಲರು ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು ಎದ್ದು ಆತನನ್ನು ಊರಹೊರಕ್ಕೆ ಅಟ್ಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಸಭಾಮಂದಿರದಲ್ಲಿ ಇದ್ದವರೆಲ್ಲರೂ ಇವುಗಳನ್ನು ಕೇಳಿ ಬಹು ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ಸಗ್ಳೆ ಆಯ್ಕುನ್ ಸಿನಾಗೊಗಾತ್ಲ್ಯಾ ಲೊಕಾಕ್ನಿ ರಾಗ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:28
13 ತಿಳಿವುಗಳ ಹೋಲಿಕೆ  

ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.


ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು.


ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


“ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.


ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಆ ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು