Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:29 - ಪರಿಶುದ್ದ ಬೈಬಲ್‌

29 ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಆ ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತಮ್ಮ ಊರು ಕಟ್ಟಿದ್ದ ಗುಡ್ಡದ ಕಡಿದಾದ ಸ್ಥಳಕ್ಕೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆನಿ ಉಟ್ಲ್ಯಾನಿ ಅನಿ ಜೆಜುಕ್ ತೆಂಚೆ ಗಾಂವ್ ಭಾಂದಲ್ಲ್ಯಾ ಮಡ್ಡಿ ವರ್‍ತಿ ವೊಡುನ್ ನ್ಹೆಲ್ಯಾನಿ, ಅನಿ ಥೈತ್ನಾ ಲೊಟುನ್ ಘಾಲುಂವಾ ಮನುನ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:29
13 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ಆದ್ದರಿಂದ ಯೇಸುವು ನಗರದ ಹೊರಗಡೆ ಸಂಕಟವನ್ನು ಅನುಭವಿಸಿದನು. ಆತನು ತನ್ನ ಜನರನ್ನು ಪವಿತ್ರರನ್ನಾಗಿಸಲು, ತನ್ನ ಸ್ವಂತ ರಕ್ತವನ್ನೇ ಅರ್ಪಿಸಿ ಸತ್ತನು.


ನಾನು ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾಗಿದ್ದೇನೆ. ಆದರೆ ನೀವು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದೀರಿ. ಅಬ್ರಹಾಮನು ಅಂಥದ್ದೇನನ್ನೂ ಮಾಡಲಿಲ್ಲ.


ನೀವು ಅಬ್ರಹಾಮನ ಮಕ್ಕಳೆಂದು ನನಗೆ ಗೊತ್ತಿದೆ. ಆದರೆ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ. ಏಕೆಂದರೆ ನನ್ನ ಉಪದೇಶವನ್ನು ಸ್ವೀಕರಿಸಿಕೊಳ್ಳಲು ನಿಮಗೆ ಇಷ್ಟವಿಲ್ಲ.


ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.


ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು.


ಯೆಹೂದದ ಸೈನಿಕರು ಸೇಯೀರಿನ ಹತ್ತುಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿದಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅಪ್ಪಳಿಸಿದಾಗ ಅವರ ದೇಹಗಳು ಚೂರುಚೂರಾದವು.


ಸಭಾಮಂದಿರದಲ್ಲಿದ್ದ ಜನರೆಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಕೋಪಗೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು