Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:31 - ಪರಿಶುದ್ದ ಬೈಬಲ್‌

31 ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್‌ದಿನದಂದು ಯೇಸು ಜನರಿಗೆ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್‍ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬಳಿಕ ಆತನು ಗಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜು ಗಾಲಿಲಿಯಾ ಪ್ರಾಂತ್ಯಾಚ್ಯಾ ಕಪರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ. ಅನಿ ಸಬ್ಬತಾಚ್ಯಾ ದಿಸಿ ಲೊಕಾಕ್ನಿ ಶಿಕ್ವುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:31
14 ತಿಳಿವುಗಳ ಹೋಲಿಕೆ  

ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.


ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’” ಎಂದು ಹೇಳಬೇಕೆಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು